E-kali

ಇಗೋ ಕನ್ನಡ ಸಾಮಾಜಿಕ ನಿಘಂಟು

275.00

Categories: ,

Description

ವಿದ್ಯೆ, ವಿದ್ವತ್ತು, ಸೃಜನಶೀಲ ಪ್ರತಿಭೆ ಮತ್ತು ವಿನಯಗಳಿಂದ ಕೂಡಿದ ಹಳೆಯ ತಲೆಮಾರಿನ ಸಾರಸ್ವತಲೋಕದ ವಿಶಿಷ್ಟ ಮಾದರಿಗೆ ಒಂದು ಜೀವಂತ ನಿದರ್ಶನ ಪ್ರೊ|| ಜಿ. ವೆಂಕಟಸುಬ್ಬಯ್ಯನವರು. ವಂಶವಾಹಿಯಾಗಿ ವಿದ್ವತ್ತನ್ನು ಬಳುವಳಿಯಾಗಿ ಪಡೆದ ವೆಂಕಟಸುಬ್ಬಯ್ಯನವರು ಸ್ವಂತ ಅಧ್ಯಯನ, ಬೋಧನೆ, ಸಂಶೋಧನೆಗಳಿಂದ ಗುಪ್ತಗಾಮಿಯಾಗಿ ರಕ್ತದೊಳಗಿದ್ದ ಈ ಆಜ್ಯವನ್ನು ಹೊತ್ತಿಸಿ, ಪ್ರಜ್ವಲಿಸುವಂತೆ ಮಾಡಿ ಅದನ್ನು ಶಿಖೆಯಲ್ಲಿ ‘ವಿದ್ಯಾಲಂಕಾರ’ವಾಗಿ ಮುಡಿದವರು; ಸಾವಿರಾರು ಜನ ಶಿಷ್ಯರಿಗೆ ಸಾಹಿತ್ಯ ಪಿಪಾಸುಗಳಿಗೆ ಜ್ಞಾನ ದೀವಿಗೆಯಾದವರು, ವೆಂಕಟಸುಬ್ಬಯ್ಯನವರ ಪ್ರತಿಭೆಯ ಆಯಾಮಗಳು ಹಲವಾರು. ಈ ಸೃಜನಶೀಲ ಪ್ರತಿಭೆಗೆ ವಿದ್ವತ್ತಿನ ಸ್ಪರ್ಶವೂ ಕೂಡಿದಾಗ ಹಲವಾರು ಕುಡಿಗಳು ಕೊನರಿದವು. ಇಂಥ ಕುಡಿಗಳಲ್ಲಿ ಕನ್ನಡ ನಿಘಂಟು ದಾಂಗುಡಿ ಇಟ್ಟು ಒಂದು ಮಹಾವೃಕ್ಷವಾಗಿಯೇ ಬೆಳೆದು ಇಂದು ಕನ್ನಡಿಗರ ಮನೆಮನೆಗಳಲ್ಲಿ ಬೆಳಗುತ್ತಿದೆ.

×

Hello!

Click one of our contacts below to chat on WhatsApp

× How can I help you?