Description
ನಾಗರಹಾವೇ ಹಾವೊಳು ಹೂವೇ
ಬಾಗಿಲ ಬಿಲದಲಿ ನಿನ್ನಯ ಠಾವೆ
ಕೈಯನು ಮುಗಿವೆ ಹಾಲನೀವೆ
ಬಾ ಬಾ ಬಾ
ಹಳದಿಯ ಹೆಡೆಯನು ಬಿಟ್ಟೋ ಬೇಗ
ಒಳಗಿನಿಂದಲೆ ಕೂಗೋ ರಾಗ
ಕೊಳಲನೂದುವೆ ಆಲಿಸು ರಾಗ
ನೀ ನೀ ನೀ ನೀ
ಎಲೆ ನಾಗಣ್ಣ ಹೇಳಲೋ ನಿನ್ನ
ತಲೆ ಯಲ್ಲಿರುವ ನಿಜವನ್ನ
ಬಡುಬಗ್ಗರಿಗೆ ಕೊಪ್ಪರಿಗೆಯ ಚಿನ್ನ
ತಾ ತಾ ತಾ ತಾ ತಾ
ಬರೀ ಮೈ ಸಣ್ಣಗೆ ಮೊಗದಲಿ ಬಿಸಿ ಹಗೆ
ಎರಡಲೆ ನಾಲಗೆ ಇದ್ದರೂ ಸುಮ್ಮಗೆ
ಎರಗುವೆ ನಿನಗೆ ಈಗಲೆ ಹೊರಗೆ
-ಪಂಜೆ ಮಂಗೇಶರಾವ್