Description
ನಮ್ಮ ಮನೆಯಲೊಂದು
ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು ಎತ್ತಿಕೊಳಲು ಹೋದರದಕೆ ಕೋಪ ಬರುವುದು
ಕೋಪ ಬರಲು ಗಟ್ಟಿಯಾಗಿ ಕಿರಿಚಿಕೊಳ್ಳುವುದು ಕಿರಿಚಿಕೊಂಡು ತನ್ನ ಮೈಯ ಪರಚಿಕೊಳ್ಳುವುದು
ಮೈಯ ಪರಚಿಕೊಂಡು ಪಾಪ ಅತ್ತು ಕರೆವುದು ಅಳಲು ಕಣ್ಣಿನಿಂದ ಸಣ್ಣ ಮುತ್ತು ಸುರಿವುದು
ಪಾಪ ಅತ್ತರಮ್ಮ ತಾನೂ ಅತ್ತುಬಿಡುವಳು ‘ಅಯ್ಯೋ ಪಾಪ’ ಎಂದುಕೊಂಡು ಮುತ್ತು ಕೊಡುವಳು
ಪಾಪ ಪಟ್ಟು ಹಿಡಿದ ಹಟವು ಸಾರ್ಥಕವಾಯಿತು. ಕಿರಿಚಿ ಪರಚಿ ಅಳುವುದೆಲ್ಲ ಅರ್ಥವಾಯಿತು.
– ಕುವೆಂಪು